Breaking NewsLatestಜಿಲ್ಲಾ ಸುದ್ದಿಬೆಂಗಳೂರು ಗ್ರಾಮಾಂತರ
ಬೊಮ್ಮಾಯಿ ಬಜೆಟ್ ಗೊತ್ತು ಗುರಿ ಇಲ್ಲದ ಬಜೆಟ್: ನಿಸರ್ಗ ನಾರಾಯಣ ಸ್ವಾಮಿ

ದೇವನಹಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿರುವ ರಾಜ್ಯ ಸರ್ಕಾರದ ಬಜೆಟ್ ಗೊತ್ತು ಗುರಿ ಇಲ್ಲದ ಬಜೆಟ್. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರೈತರ 25 ಸಾವಿರ ಸಾಲ ಮನ್ನಾ ಮಾಡಿದ್ದರು. ಕೋವಿಡ್ ಸಂಕಷ್ಟದಲ್ಲಿದ್ದವರ ನೆರವಿಗೆ ಧಾವಿಸದೆ ಅಂತವರ ಕಷ್ಟಗಳಿಗೆ ನೆರವಾಗದ ಬಜೆಟ್ ಮಂಡಿಸಿದ್ದಾರೆ ಎಂದು ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ.
ರಾಜ್ಯ ಬಜೆಟ್ನಲ್ಲಿ ಬೆಂಗಳೂರು ಗ್ರಾಮಾಂತರ ಪ್ರದೇಶದ ಯಾವುದೇ ಬೇಡಿಕೆಗಳು ಈಡೇರಿಲ್ಲ. ಗ್ರಾಮಾಂತರ ಜಿಲ್ಲೆಗೆ ದೇವನಹಳ್ಳಿ ಕೇಂದ್ರ ಆಗಿರುವುದರಿಂದ ಇದನ್ನು ಜಿಲ್ಲೆಯಾಗಿ ಘೋಷಣೆ ಮಾಡಬೇಕೆಂಬ ನಮ್ಮ ಬೇಡಿಕೆಯನ್ನು ಈಡೇರಿಸಿಲ್ಲ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಮೆಟ್ರೋ ರೈಲು ದೇವನಹಳ್ಳಿಗೂ ವಿಸ್ತರಣೆಯಾಗಬೇಕೆಂಬುವುದಕ್ಕೂ ಗಮನಹರಿಸಿಲ್ಲ. ದೇವನಹಳ್ಳಿ ಮತ್ತು ವಿಜಯಪುರಗಳಲ್ಲಿ ಹೈಟೆಕ್ ಬಸ್ ನಿಲ್ದಾಣ ಮಾಡಬೇಕು ಎಂಬ ಬೇಡಿಕೆಗೂ ಸ್ಪಂದಿಸಿಲ್ಲ ಎಂದು ಶಾಸಕ ನಿಸರ್ಗ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ.
