Breaking NewsLatestಕ್ರೈಂಜಿಲ್ಲಾ ಸುದ್ದಿರಾಮನಗರ

ರೇಷ್ಮೆ ನಗರದಲ್ಲಿ ಗಾಂಜಾ ಗಮ್ಮತ್ತು: ಆರೋಪಿ ಬಂಧನ!

ರಾಮನಗರ: ರೇಷ್ಮೆನಗರ ಅಂತಲೇ ಕರೆಸಿಕೊಳ್ಳುವ ರಾಮನಗರದಲ್ಲಿ ಇತ್ತೀಚೆಗೆ ಅಕ್ರಮ ಗಾಂಜಾ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಈ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸ್ ಇಲಾಖೆ ಗಾಂಜಾ ಸಾಗಾಟ ಮಾಡುವವರ ಮೇಲೆ ಹದ್ದಿನ ಕಣ್ಣಿಟ್ಟಿತ್ತು. ಅದರಂತೆ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ನಗರದ ಅಂಚೆ ಕಛೇರಿ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಗ್ಗೆ ಸುಳಿವು ದೊರಕಿತ್ತು. ಅದ್ರಂತೆ ಆತ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ರೆಡ್ ಹ್ಯಾಂಡಾಗಿ ಆತನನ್ನ ಚನ್ನಪಟ್ಟಣ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂಲತಃ ಬೆಂಗಳೂರಿನ ನಿವಾಸಿಯಾಗಿದ್ದ ಸೈಯದ್ ಅಕ್ರಂ ಬಂಧಿತ ಆರೋಪಿ. ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಚನ್ನಪಟ್ಟಣ ವೃತ್ತ ನಿರೀಕ್ಷಕರಾದ ದಿವಾಕರ್ ಹಾಗೂ ಕ್ರೈಂ ಸಿಬ್ಬಂದಿಗಳು ಆರೋಪಿಯನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿ ಸೈಯದ್ ಸುಮಾರು 42ಗ್ರಾಂ ಗಾಂಜಾ ಮಾರಾಟ ಮಾಡಲು ಮುಂದಾಗಿದ್ದ. ಇದೀಗ ಗಾಂಜಾವನ್ನ ವಶಕ್ಕೆ ಪಡೆದು ಮುಂದಿನ ತನಿಖೆ ನಡೆಸಲಾಗುತ್ತಿದೆ.

Spread the love

Related Articles

Leave a Reply

Your email address will not be published. Required fields are marked *

Back to top button