ಸಿಧು ಬರಿ ಬೊಗಳೇ ನಾಯಕ : ಅಮರಿಂದರ್

ಅಮೃತಸರ: ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಪಂಜಾಬ್ ಲೋಕ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ 22 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು ಮುಂದಿನ ಒಂದೆರಡು ದಿನಗಳಲ್ಲಿ ಮತ್ತೊಂದು ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
ಒಟ್ಟು 38 ಸ್ಥಾನಗಳಲ್ಲಿ ಪಕ್ಷ ಸ್ಪರ್ಧೆ ಮಾಡಲಿದೆ. ಪಾಟಿಯಾಲ ನಗರ ಕ್ಷೇತ್ರದಿಂದ ತಾವು ಮತ್ತೆ ವಿಧಾನಸಭೆ ಚುನಾವಣಾ ಕಣಕ್ಕೆ ಧುಮುಕುವುದಾಗಿ ಅಮರಿಂದರ್ ಸಿಂಗ್ ಹೇಳಿಕೊಂಡಿದ್ದಾರೆ.
ಈ ನಡುವೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿದ್ದು ವಿರುದ್ದ ತೀವ್ರ ವಾಗ್ದಾಳಿ ನಡೆಸಿದ ಅವರು, ಸಿಧು ಒಬ್ಬ ಬೆನ್ನು ಮೂಳೆ ಮತ್ತು ಮೆದುಳು ಇಲ್ಲದ ಬೊಗಳೆ ನಾಯಕ, ಅವರಿಂದ ಕಾಂಗ್ರೆಸ್ ಗೆ ಯಾವುದೇ ಪ್ರಯೋಜನ ಆಗುವುದಿಲ್ಲ, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಕಾಂಗ್ರೆಸ್ ನಾಯಕರಿಗೆ ಮನವರಿಕೆ ಮಾಡಿದ್ದರೂ ಪ್ರಯೋಜನವಾಗಲಿಲ್ಲ, ಇದರ ಫಲವನ್ನು ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಅನುಭವಿಸಲಿದೆ ಎಂದೂ ಕ್ಯಾಪ್ಟನ್ ಕಿಡಿಕಾರಿದ್ದಾರೆ.
