Breaking NewsLatestರಾಷ್ಟ್ರೀಯಸುದ್ದಿ

NSG ಮಾಜಿ CEO ಚಿತ್ರಾ ರಾಮಕೃಷ್ಣ ಬಂಧನ

ನವದೆಹಲಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಷೇರುಪೇಟೆಯ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಪೊಲೀಸರು ಬಂಧಿಸಿದ್ದಾರೆ.

ಚಿತ್ರಾ ರಾಮಕೃಷ್ಣ ಹಿಮಾಲಯದಲ್ಲಿ ವಾಸಿಸುವ ನಿಗೂಢ ಯೋಗಿಯೊಂದಿಗೆ ಇಮೇಲ್ ಮೂಲಕ ರಾಷ್ಟ್ರೀಯ ಸ್ಟಾಕ್ ಎಕ್ಸ್​ಚೇಂಜ್ ಕುರಿತಾದ ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು ಎಂಬ ಆರೋಪದ ಮೇಲೆ ಬಂಧಿಸಲಾಗಿದೆ. ಇದೇ ಪ್ರಕರಣದಲ್ಲಿ ಈಗಾಗ್ಲೆ ಫೆಬ್ರವರಿ 25ರಂದು ಎನ್​ಎಸ್​​ಇಯ ಮಾಜಿ ಸಿಒಒ ಆನಂದ್ ಸುಬ್ರಮಣಿಯನ್ ಅವರನ್ನ ಸಿಸಿಬಿ ಬಂಧಿಸಿತ್ತು.

ಚಿತ್ರಾ ರಾಮಕೃಷ್ಣ 2013 ಮತ್ತು 2016ರ ನಡುವೆ ಎನ್‍ಎಸ್‍ಇಯಲ್ಲಿ ಸಿಇಒ ಆಗಿ ಸೇವೆ ಸಲ್ಲಿಸಿದ್ದಾರೆ. 2010 ಮತ್ತು 2015 ರ ನಡುವೆ ಎನ್‍ಎಸ್‍ಇಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸೆಕ್ಯುರಿಟೀಸ್ ಅಂಡ್ ಎಕ್ಸ್​ಚೇಂಜ್ ಬೋರ್ಡ್ ಆಫ್ ಇಂಡಿಯಾ ಆಂತರಿಕ ತನಿಖೆ ನಡೆಸಿತ್ತು.

ಚಿತ್ರಾ ರಾಮಕೃಷ್ಣ ಅಪರಿಚಿತ ವ್ಯಕ್ತಿಯೊಂದಿಗೆ ಇಮೇಲ್ ಮೂಲಕ ಪತ್ರವ್ಯವಹಾರ ಕುರಿತಂತೆ ಎನ್‍ಎಸ್‍ಇಯ ಆಂತರಿಕ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದು, ಈ ಸಂಬಂಧ ಸಾಕ್ಷ್ಯಗಳು ಸಿಕ್ಕಿವೆ ಸೆಬಿ ತಿಳಿಸಿದೆ. ಚಿತ್ರಾ ರಾಮಕೃಷ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶನಿವಾರ ನ್ಯಾಯಾಲಯವು ತಿರಸ್ಕರಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button