Breaking NewsLatestಜಿಲ್ಲಾ ಸುದ್ದಿಮನರಂಜನೆಮೈಸೂರುಸಿನಿಮಾಸ್ಯಾಂಡಲ್ ವುಡ್

ಅಪ್ಪು ಇಲ್ಲದ ಹುಟ್ಟುಹಬ್ಬ ಆಚರಣೆ ತುಂಬಾ ದುಃಖದ ವಿಚಾರ: ಶಿವರಾಜ್ ಕುಮಾರ್

ಮೈಸೂರು: ಡಬ್ಬಿಂಗ್ ಮಾಡುವ ವೇಳೆ ನನಗೆ ತುಂಬಾ ನೋವಾಗುತ್ತಿತ್ತು. ಅಪ್ಪು ಇಲ್ಲದ ಹುಟ್ಟುಹಬ್ಬ ಆಚರಣೆ ತುಂಬಾ ದುಃಖದ ವಿಚಾರ ಎಂದು ನಟ ಶಿವರಾಜ್​ಕುಮಾರ್​ ಬೇಸರ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏನ್ ಇದೆ ಅದನ್ನ ನೋಡಿಕೊಂಡು ಮುಂದೆ ಹೋಗುತ್ತಿರಬೇಕು‌. ಹುಟ್ಟುಹಬ್ಬಕ್ಕೆ ಇಬ್ಬರೂ ಗಿಫ್ಟ್​ಗಳನ್ನ ಶೇರ್ ಮಾಡಿಕೊಳ್ಳುತ್ತಿದ್ದೆವು. ಅಪ್ಪುಗೆ ಬ್ರಾಂಡ್ ವಾಚ್, ಬೆಲ್ಟ್, ಗಾಗಲ್ ಸಾಕಷ್ಟು ಕೊಟ್ಟಿದ್ದೇನೆ. ಅವನಿಗೆ ಬ್ರಾಂಡ್ ಅಂದ್ರೆ ಇಷ್ಟ. ಅಪ್ಪು ಎಲ್ಲರ ಹೃದಯದಲ್ಲಿ ಇದ್ದಾನೆ‌.
ಅವನ ಸಿನಿಮಾ ಬಿಡುಗಡೆಯಾಗಿದೆ. ಅವನಿಲ್ಲದ ವೇಳೆ ಸಿನಿಮಾ ಬಿಡುಗಡೆ ಹೆಚ್ಚು ದುಃಖ ತರುತ್ತಿದೆ.

ಫಿಲ್ಮ್ ಸಿಟಿಗೆ ಪುನೀತ್ ರಾಜ್​ಕುಮಾರ್ ಹೆಸರಿಡುವ ವಿಚಾರವಾಗಿ ಮಾತನಾಡಿ, ಪುನೀತ್ ಹೆಸರಿಟ್ಟರೆ ಸಂತೋಷವಾಗುತ್ತೆ. ಕುಟುಂಬ ಸದಸ್ಯನಾಗಿ ನಾನು ಆ ರೀತಿಯ ಒತ್ತಾಯ ಮಾಡಲ್ಲ. ಅಭಿಮಾನಿಗಳು ಅಭಿಮಾನದಿಂದ ಹೇಳ್ತಿದ್ದಾರೆ. ಅದರಂತೆ ಪುನೀತ್ ರಾಜ್​ಕುಮಾರ್ ಹೆಸರಿಟ್ಟರೂ ಸಂತೋಷ‌. ಚಿತ್ರರಂಗಕ್ಕೆ ದುಡಿದವರು ಸಾಕಷ್ಟು ಮಂದಿ ಇದ್ದಾರೆ. ಅವರ ಹೆಸರನ್ನು ಇಡಬಹುದು ಎಂದು ಶಿವರಾಜ್ ಕುಮಾರ್ ಹೇಳಿದರು.

Spread the love

Related Articles

Leave a Reply

Your email address will not be published. Required fields are marked *

Back to top button