Breaking NewsLatestಉಡುಪಿಚಿಕ್ಕಮಗಳೂರುಜಿಲ್ಲಾ ಸುದ್ದಿದಕ್ಷಿಣ ಕನ್ನಡರಾಜ್ಯಸುದ್ದಿ

ಚತುಷ್ಪಥ ರಸ್ತೆಯಾಗಲಿದೆ ಶಿರಾಡಿ ಘಾಟ್ ಹೆದ್ದಾರಿ, ಕೊನೆಗೂ ಕೂಡಿ ಬಂದ ಯೋಗ; ಸಿಎಂ ಸಂತಸ

ಬೆಂಗಳೂರು : ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ. ಎನ್.ಹೆಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ವತಿಯಿಂಧ ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾದ್ದು ಅನಿವಾರ್ಯವಾಗಿತ್ತು. ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತಿತ್ತು. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ.

ಬೆಂಗಳೂರು ಮತ್ತು ಮಂಗಳೂರಿನ ಸಂಪೂರ್ಣ ಮಾರ್ಗ ಏಕರೀತಿಯ ಚತುಷ್ಪಥ ರಸ್ತೆಯಾಗಲಿದೆ. ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಸುಸ್ಥಿರ ರೀತಿಯಲ್ಲಿ ಎನ್.ಹೆಚ್ 75 ನ್ನು ಚತುಷ್ಪಥವಾಗಿಸುವ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿ ಗೊಳಿಸಬಹುದಾಗಿದೆ.

ಸುರಂಗ ಮಾರ್ಗ ಅಧ್ಯಯನಕ್ಕೆ ಸೂಚನೆ

ಈ ನಡುವೆ, ಶಿರಾಡಿ ಘಾಟ್ ಮೂಲಕ ಷಟ್ಪಥ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಅಧ್ಯಯನ ಕೈಗೊಳ್ಳಲು ಎನ್.ಹೆಚ್. ಎ. ಐ. ಗೆ ಕೇಂದ್ರ ಸಚಿವರು ಸೂಚಿದ್ದಾರೆ ಎಂದು ತಿಳಿದು ಬಂದಿದೆ.

Spread the love

Related Articles

Leave a Reply

Your email address will not be published. Required fields are marked *

Back to top button