ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಬೇಡ; ಪ್ರಮೋದಾದೇವಿ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣದ ಅವಶ್ಯಕತೆ ಇಲ್ಲ. ನಗರದಿಂದ ಬೆಟ್ಟಕ್ಕೆ ಹೋಗಲು ಕೇವಲ 20 ನಿಮಿಷ ಸಾಕು. ಪರಿಸರ ನಾಶ ಮಾಡಿ ರೋಪ್ ವೇ ಮಾಡುವ ಅಗತ್ಯವಿಲ್ಲ. ಚಾಮುಂಡಿ ಬೆಟ್ಟ ಧಾರ್ಮಿಕ ಕ್ಷೇತ್ರವಾಗಿ ಉಳಿಯಬೇಕು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ
ನಗರದಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ದೃಷ್ಟಿಯಿಂದ ಅಭಿವೃದ್ಧಿ ಮಾಡಿದ್ರೆ ನಾಶವಾಗುತ್ತೆ. ಈಗಾಗಲೇ ಚಾಮುಂಡಿ ಬೆಟ್ಟದ ಪರಿಸರಕ್ಕೆ ಡ್ಯಾಮೇಜ್ ಆಗಿದೆ. ಈ ಹಿಂದೆ ಬೆರಳೆಣಿಕೆಯಷ್ಟಿದ್ದ ಮನೆ ಇಂದು ಗ್ರಾಮವಾಗಿದೆ. ಬೆಟ್ಟದ ಮೇಲೆಯೇ ನಗರ ಪ್ರದೇಶ ನಿರ್ಮಾಣವಾಗುತ್ತಿದೆ. ಚಾಮುಂಡಿ ಬೆಟ್ಟದ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು. ಆಲ್ಲಿ ಕಮರ್ಷಿಯಲ್ ಮಳಿಗೆಗಳ ಅವಶ್ಯಕತೆಯೂ ಇಲ್ಲ. ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳನ್ನ ನೀಡಿದರೆ ಸಾಕು ಎಂದರು.
ಈ ಮೊದಲು ಕೂಡ ಮೈಸೂರು ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಯೋಜನೆಗೆ ಹಲವು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿತ್ತು. ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ವಿಚಾರಕ್ಕೆ ವಿರೋಧ ವ್ಯಕ್ತವಾಗಿತ್ತು. ರೋಪ್ ವೇ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಮೈಸೂರು ಕನ್ನಡ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
