ಧಾರವಾಡದ ಕರ್ನಾಟಕ ಕಾಲೇಜು ಪ್ರಾಚಾರ್ಯರ ಬಂಧನಕ್ಕೆ ನ್ಯಾಯಾಲಯ ಆದೇಶ

ಧಾರವಾಡ : ವಿದ್ಯಾಕಾಶಿ ಧಾರವಾಡದ ಪ್ರತಿಷ್ಠಿತ ಕಾಲೇಜವೊಂದರ ಪ್ರಾಚಾರ್ಯರೊಬ್ಬರು ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿಲುಕಿಕೊಂಡಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ಅವರ ಬಂಧನಕ್ಕೆ ಈಗ ಸೂಚನೆ ನೀಡಿದೆ.
ನಗರದ ಕರ್ನಾಟಕ ಕಾಲೇಜಿನ ಪ್ರಾಚಾರ್ಯರಾದ ದುರಗಪ್ಪ ಕರಡೋಣಿಗೆ ಅವರಿಗೆ ವಾರಂಟ್ ಜಾರಿಯಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್‌ನ ಜೆಎಂಎಫ್ಸಿ ನ್ಯಾಯಾಲಯದಿಂದ ಬಂಧನ ವಾರಂಟ್ ನೀಡಲಾಗಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ, ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲವು ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ ಏನು?
ಗೋಕಾಕ್‌ನ ಮೂಲದ ವಿಠ್ಠಲ್ ಎನ್ನುವವರ ಬಳಿ ಧಾರವಾಡ ಕರ್ನಾಟಕ ಕಾಲೇಜಿನ ಪ್ರಾಚಾರ್ಯರಾದ ಕರಡೋಣಿಯವರು 3 ಲಕ್ಷ ರೂ. ಹಣ ಪಡೆದಿದ್ದರು. ಹಣ ಹಿಂತಿರುಗಿಸಲು ಚೆಕ್ ನೀಡಿದ್ದರು. ಆದರೆ ಖಾತೆಯಲ್ಲಿ ಹಣವಿಲ್ಲದೇ ಚೆಕ್ ಬೌನ್ಸ್ ಆಗಿರುವುದು ಕಂಡುಬಂದಿತ್ತು. ಹಣ ಮರಳಿಸುವಂತೆ ಹಲವು ಬಾರಿ ವಿಠ್ಠಲ ಅವರು ಪ್ರಾಚಾರ್ಯರಿಗೆ ಕೇಳಿಕೊಂಡರು ಹಣ ನೀಡದ ಹಿನ್ನೆಲೆಯಲ್ಲಿ, ವಿಠ್ಠಲ್ ಅವರು ನ್ಯಾಯಾಲಯದ ಮೆಟ್ಟಿಲು ಏರಿದ್ದಾರೆ.
ನಂತರ ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಾಚಾರ್ಯರು ಕೋರ್ಟ್‌ಗೆ ಹಾಕರಾಗಿರಲಿಲ್ಲ. ಹಾಗಾಗಿ ನ್ಯಾಯಾಧೀಶರು ಕೂಡಾ ಪ್ರಾಚಾರ್ಯರರ ವಿರುದ್ಧ ಕೋರ್ಟ್ ಗರಂ ಆಗಿದ್ದು, ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಹಾಜರಾಗದ ಕರ್ನಾಟಕ ಕಾಲೇಜಿನ ಪ್ರಾಚಾರ್ಯ ದುರಗಪ್ಪ ಕರಡೋಣಿಯವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಒಡಿಸುವಂತೆ ಆದೇಶ ಹೊರಡಿಸಲಾಗಿದೆ
