Breaking NewsLatestಉತ್ತರ ಕನ್ನಡಜಿಲ್ಲಾ ಸುದ್ದಿ
ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಕಾರವಾರ : ಅತಿವೃಷ್ಟಿಯಿಂದ ಹಾನಿಗೊಳಗಾದ ಯಲ್ಲಾಪುರ ತಾಲೂಕಿನ ಕಳಚೆ ಭಾಗದ ಪ್ರದೇಶಗಳಿಗೆ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕರಾದ ಶಿವರಾಮ್ ಹೆಬ್ಬಾರ್ ಅವರು ಮುಖ್ಯಮಂತ್ರಿಗಳಿಗೆ ಹಾನಿಗೊಳಗಾದ ಪ್ರದೇಶಗಳ ಸಂಪೂರ್ಣ ಮಾಹಿತಿ ನೀಡಿದರು. ಸಂತ್ರಸ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿದರು.
ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಪುನರ್ ನಿರ್ಮಾಣಕ್ಕಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವುದರ ಜೊತೆಯಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರದಲ್ಲೇ ಪರಿಹಾರವನ್ನು ಮಂಜೂರು ಮಾಡುವಂತೆ ಶಿವರಾಮ್ ಹೆಬ್ಬಾರ್ ಅವರು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರು ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
