Breaking NewsLatestಜಿಲ್ಲಾ ಸುದ್ದಿತುಮಕೂರು

ತುಮಕೂರು ಬಸ್ ಅಪಘಾತ: ತಪಿತಸ್ಥರ ವಿರುದ್ಧ ಶಿಸ್ತುಕ್ರಮ: ಸಿಎಂ ಬಸವರಾಜ ಬೊಮ್ಮಾಯಿ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆಯ ಕೆರೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಎಂಟು ಮಂದಿಯ ಸಾವಿಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಮಾತನಾಡಿದ ಅವರು, ಅಪಘಾತಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಲಾಗುವುದು. ತುಮಕೂರು ಬಸ್ ಅಪಘಾತ ಹೇಗಾಗಿದೆ, ಏನಾಗಿದೆ ಎಂಬುದರ ಬಗ್ಗೆ ಮಾಹಿತಿ ತರಿಸಿಕೊಳ್ಳುತ್ತೇನೆ. ಎಲ್ಲ ವಿವರಗಳನ್ನು ಪಡೆದುಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ತಿಳಿಸಿದ್ದಾರೆ.

ಇಂದು ಬೆಳಗ್ಗೆ 9.20 ಗಂಟೆ ಸುಮಾರಿಗೆ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು. 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಳುಗಳನ್ನ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಖಾಸಗಿ ಬಸ್ ನಲ್ಲಿ 60ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದು ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ಚಾಲಕನ ನಿಯಂತ್ರಣ ಪತ್ತಿ ಬಸ್ ಪಲ್ಟಿ ಆಗಿದ್ದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Spread the love

Related Articles

Leave a Reply

Your email address will not be published. Required fields are marked *

Back to top button