Breaking NewsLatestಮೆಟ್ರೋರಾಜಕೀಯ

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿದ್ದಾರೆ.

ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿಗಳ ಆಶೀರ್ವಾದ ಪಡೆದರು.  ಈ ವೇಳೆ ದೇವೇಗೌಡರು ನೂತನ ಸಿಎಂಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದರು. ಬಳಿಕ ಕೆಲ ಕಾಲ ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು.

ದೇವೇಗೌಡರ ಭೇಟಿ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಜನತಾಪರಿವಾದಲ್ಲಿದ್ದಾಗಿನ ಒಡನಾಟ, ಹಳೆ ನೆನಪುಗಳನ್ನು ಮೆಲುಕು ಹಾಕಿದೆವು. ಸಿಕ್ಕಿರುವ ಅವಕಾಶ ಸಮರ್ಥವಾಗಿ ಬಳಸಿಕೊಂಡು, ರಾಜ್ಯಕ್ಕೆ ಉತ್ತಮವಾಗಿ ಆಡಳಿತ ನೀಡುವಂತೆ ಮಾರ್ಗದರ್ಶನ ನೀಡಿದರು ಎಂದು ಹೇಳಿದರು.

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಸಚಿವರಾದ ವಿ ಸೋಮಣ್ಣ ಹಾಗೂ ಹೆಚ್ ಡಿ ರೇವಣ್ಣ ಸಾಥ್​ ನೀಡಿದರು.

Spread the love

Related Articles

Leave a Reply

Your email address will not be published. Required fields are marked *

Back to top button