Breaking NewsLatest
ಕೇಂದ್ರ ಗೃಹಸಚಿವರನ್ನು ಭೇಟಿಯಾಗುವಂತೆ ಕರ್ನಾಟಕದ ಸಂಸದರಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಗಡಿ ವಿವಾದ ಸಂಬಂಧ ಮಹಾರಾಷ್ಟ್ರ ದ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಬೆನ್ನಲ್ಲೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲಾ ಸಂಸದರು ಕೇಂದ್ರ ಗೃಹಸಚಿವರನ್ನು ಭೇಟಿಯಾಗುವಂತೆ ಸಂಸದರಿಗೆ ಸೂಚಿಸಿದ್ದಾರೆ.
ಅಲ್ಲದೆ ಮಹಾರಾಷ್ಟ್ರದ ನಿಯೋಗವು ಕೇಂದ್ರ ಗೃಹಸಚಿವರನ್ನು ಭೇಟಿಯಾಗಿರುವುದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ, ನಾವು ಕೂಡ ಗೃಹಸಚಿವರನ್ನು ಭೇಟಿಯಾಗಿ ರಾಜ್ಯದ ನ್ಯಾಯ ಸಮ್ಮತ ನಿಲುವನ್ನು ತಿಳಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವುದು ಯಾವುದೇ ವ್ಯತ್ಯಾಸ ಆಗುವುದಿಲ್ಲ. ಈ ಹಿಂದೆ ಕೂಡ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ. ಈ ಪ್ರಕರಣ ಸುಪ್ರೀಂ ಕೊರ್ಟ್ನಲ್ಲಿದೆ. ಸುಪ್ರೀಂ ಕೋರ್ಟ್ನಲ್ಲಿ ನಮ್ಮ ನ್ಯಾಯ ಸಮ್ಮತ ಪ್ರಕರಣ ಗಟ್ಟಿಯಾಗಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
