Breaking NewsLatest
ಹಣಕಾಸು ಸಚಿವೆ ಭೇಟಿ ಮಾಡಿದ ಬೊಮ್ಮಾಯಿ; ಜಿಎಸ್ಟಿ ಪರಿಹಾರ ಬಿಡುಗಡೆಗೆ ಮನವಿ

ನವದೆಹಲಿ: ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ ಎಂದು ಹೇಲಿದರು.
ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಅಡಚಣೆ ಎದುರಾಗಿರುವುದರಿಂದ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಇದಲ್ಲದೆ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅಗತ್ಯವಿರುವ ಅನುದಾನ ಬಿಡುಗಡೆಯ ಕುರಿತೂ ಸಹ ಕೇಂದ್ರ ಸಚಿವರ ಗಮನಸೆಳೆದಿದ್ದೇನೆ ಎಂದರು.
