Breaking NewsLatestಜಿಲ್ಲಾ ಸುದ್ದಿಸುದ್ದಿಹುಬ್ಬಳ್ಳಿ - ಧಾರವಾಡ

ಹುಬ್ಬಳ್ಳಿಯಲ್ಲಿ ಸಿಎಂ ಹುಟ್ಟುಹಬ್ಬಕ್ಕೆ ವಿಶೇಷ ಪೂಜೆ

ಹುಬ್ಬಳ್ಳಿ: ತಮ್ಮ ಸರಳತೆಯಿಂದಲೇ ಎಲ್ಲರ ಪ್ರೀತಿ ಹಾಗೂ ವಿಶ್ವಾಸಕ್ಕೆ ಪಾತ್ರವಾಗುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಸಿಎಂ ತವರು ನಗರ ಹುಬ್ಬಳ್ಳಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಸಂಘದ ಸದಸ್ಯರು ಸಿಎಂ ಬೊಮ್ಮಾಯಿ ಅವರ ಆರೋಗ್ಯ, ಆಯಸ್ಸಿಗೆ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು.    ‌

ನಗರದ ಶ್ರೀ ಸಿದ್ದಾರೂಢರ ಮಠದಲ್ಲಿ ಕಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಸಂಘದ ಸಂಸ್ಥಾಪಕ ಸುರೇಶ ಗೋಕಾಕ್ ಅವರ ನೇತೃತ್ವದಲ್ಲಿ ಈ ಸಂದರ್ಭದಲ್ಲಿ ಹೋಮ ಹವನ‌ ನಡೆಯಿತು. ಕೆಂಪು-ಹಳದಿ ಬಣ್ಣದ ರಂಗೋಲಿಯಲ್ಲಿ ಕಲಾವಿದರೊಬ್ಬರು ಬೊಮ್ಮಾಯಿ ಭಾವಚಿತ್ರ ಬಿಡಿಸಿ ತಮ್ಮ ಅಭಿಮಾನ ವ್ಯಕ್ತಪಡಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button