Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜಕೀಯರಾಜ್ಯಸುದ್ದಿ

ಅನಂತ ಪ್ರೇರಣಾ ಕೇಂದ್ರವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಅನಂತ್ ಕುಮಾರ್ ಅವರು ರಾಜ್ಯದ ನೆಲ ಜಲ ವಿಷಯಗಳಲ್ಲಿ ರಾಜ್ಯ ಹಾಗೂ ಕನ್ನಡ ಜನರ ಪರ ಗಟ್ಟಿ ನಿಲುವು ಹೊಂದಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಬೆಂಗಳೂರಿನ ಜಯನಗರ ಬಡಾವಣೆಯ ಅನಂತ್ ಕುಮಾರ್ ಅವರ ಕಚೇರಿಯಲ್ಲಿ ಅನಂತ ಪ್ರೇರಣಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಬೆಂಗಳೂರಿನ ಮೆಟ್ರೋ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗ, ಕೃಷ್ಣಾ ಮೇಲ್ದಂಡೆ ಯೋಜನೆ, ಕಾವೇರಿ ಜಲ ವಿಷಯದಲ್ಲಿ ಬಿಗಿ ನಿಲುವಿನಿಂದ ರಾಜ್ಯಕ್ಕೆ ಪರಿಹಾರ ಕೊಡಿಸುವಲ್ಲಿ ಅನಂತಕುಮಾರ್ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರು ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ.

ಕೇಂದ್ರದಿಂದ ಆಗಬೇಕಾದ ಬೆಂಗಳೂರಿನ ಹಾಗೂ ರಾಜ್ಯದ ಎಲ್ಲ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಹಕಾರ ನೀಡಿದ್ದರು ಎಂದು ಸಿಎಂ ಬೊಮ್ಮಾಯಿ ಹೇಳಿದರು. ಅತ್ಯಂತ ಆತ್ಮೀಯ ಸ್ನೇಹಿತರಾಗಿದ್ದ ಅವರ ಸ್ಥಾನಮಾನಗಳು ನಮ್ಮೊಂದಿಗಿನ ಸ್ನೇಹವನ್ನು ಬದಲಾಯಿಸಿರಲಿಲ್ಲ. ಕೃಷ್ಣಾ ಟ್ರಿಬ್ಯುನಲ್ ವಿಚಾರದಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ನ್ಯಾಯ ಸಮ್ಮತವಾಗಿ ಕರ್ನಾಟಕದ ಪರವಾಗಿ ಹೋರಾಟ ಮಾಡಿ ಕರ್ನಾಟಕದ ಹಿತ ಕಾಪಾಡಿದ್ದಾರೆ. ಆ ಮೂಲಕ ರಾಜ್ಯದ ಆಪತ್ತನ್ನು ಅವರು ತಪ್ಪಿಸಿದರು ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button