Breaking NewsLatestರಾಜ್ಯಸುದ್ದಿ

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ

ಬೆಂಗಳೂರು: ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ.ಎಂ.ಇಬ್ರಾಹಿಂ ಇದೀಗ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ಬೆಳಿಗ್ಗೆ ವಿಧಾನಸೌಧದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಗೆ ಆಗಮಿಸಿದ ಸಿ. ಎಂ. ಇಬ್ರಾಹಿಂ ಸಭಾಪತಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಕಳೆದ ಹಲವು ತಿಂಗಳಿಂದ ಕಾಂಗ್ರೆಸ್ ಪಕ್ಷದ ಮೇಲೆ ಮುನಿಸಿಕೊಂಡಿದ್ದ ಇಬ್ರಾಹಿಂ ಜೆಡಿಎಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಈ ಸಂಬಂಧ ಜೆಡಿಎಸ್ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಮತ್ತು ದೇವೇಗೌಡರನ್ನೂ ಸಂಪರ್ಕಿಸಿದ್ದರು ಎಂದು ಮೂಲಗಳು ತಿಳಿಸಿದ್ದವು. ಜೆಡಿಎಸ್ ನಲ್ಲಿ ಸಿಗಲಿರುವ ಸ್ಥಾನಮಾನಗಳ ಬಗ್ಗೆ ಈವರೆಗೆ ಇಬ್ರಾಹಿಂ ಅವರಿಗೆ ಯಾವುದೇ ಸ್ಪಷ್ಟ ಭರವಸೆ ಸಿಕ್ಕಿಲ್ಲ. ಆದ್ರೆ ಜೆಡಿಎಸ್ ಸೇರ್ಪಡೆ ಕುರಿತಂತೆ ಮಾರ್ಚ್ 19ರಂದು ಕುಮಾರಸ್ವಾಮಿ ಇಬ್ರಾಹಿಂ ಜೊತೆ ಮಾತುಕತೆ ನಡೆಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button