
ವಿವೇಕ್ ಅಗ್ನಿಹೋತ್ರಿ ನಿರ್ದೇಶಕದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಸಿನಿಮಾ ನೋಡಿದ ರಾಜಕೀಯ ನಾಯಕರು ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದ್ದಾರೆ. ಚಿತ್ರದ ಕುರಿತಾಗಿ ಪರ, ವಿರೋಧಗಳು ಕೇಳಿ ಬರ್ತಿದೆ. ಇದೀಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದು ಕಾಶ್ಮೀರಿ ಪಂಡಿತರಿಗೆ 32 ವರ್ಷಗಳ ಬಳಿಕ ಸಿನಿಮಾ ಸಿಕ್ಕಿದೆ ನ್ಯಾಯ ಅಲ್ಲ ಎಂದಿದ್ದಾರೆ.
ಕಾಶ್ಮೀರದಿಂದ ಸ್ಥಳಾಂತರಗೊಂಡ ಜನರ ಬಗ್ಗೆ ನನಗೆ ಸಹಾನುಭೂತಿ ಇದೆ. 32 ವರ್ಷ ಕಳೆದರೂ ಕಾಶ್ಮೀರಿ ಪಂಡಿತರಿಗೆ ನ್ಯಾಯ ಸಿಕ್ಕಿಲ್ಲ. ಬದಲಿಗೆ ಅವರಿಗೆ ಸಿಕ್ಕಿದ್ದು ಸಿನಿಮಾ ಮಾತ್ರ. ಇದು ತಪ್ಪು ಎಂದಿದ್ದಾರೆ.
ಕಳೆದ ಎಂಟು ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಕಾಶ್ಮೀರಿ ಪಂಡಿತರಿಗಾಗಿ ಬಿಜೆಪಿ ಸರ್ಕಾರ ಏನು ಮಾಡಿದೆ? ಈಗ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ. ಕಾಶ್ಮೀರಿ ಪಂಡಿತರಿಗೆ ಬೇಕಾಗಿರುವುದು ನ್ಯಾಯ. ಇದಲ್ಲ ಎಂದಿದ್ದಾರೆ.
ಕಾಶ್ಮೀರಿ ಪಂಡಿತರಿಗೆ ನ್ಯಾಯ ಒದಗಿಸಲು ಏಕೈಕ ಮಾರ್ಗ ಎಂದರೆ ಪುನರ್ವಸತಿ ಕಲ್ಪಿಸುವುದಾಗಿದೆ. ತಪ್ಪಿತಸ್ಥರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಬೇಕು. ಇದಕ್ಕೆ ಪ್ರತಿ ರಾಜ್ಯದಲ್ಲಿರುವ ಸರ್ಕಾರವೂ ಬೆಂಬಲಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಈ ನಿಟ್ಟಿನಲ್ಲಿ ಕೇಂದ್ರವು ಒಂದು ಹೆಜ್ಜೆ ಮುಂದಿಟ್ಟರೆ ನಾವು ಖಂಡಿತವಾಗಿಯೂ ಬೆಂಬಲಿಸುತ್ತೇವೆ ಎಂದು ತಿಳಿಸಿದ್ದಾರೆ.
