Breaking NewsLatestಕಲಬುರ್ಗಿಜಿಲ್ಲಾ ಸುದ್ದಿ

ಬಸವರಾಜ ಹೊರಟ್ಟಿ ವಿರುದ್ಧ ದೂರು ಪ್ರಕರಣ: ಗ್ರಾಮೀಣ ಠಾಣೆಯ ಸಿಪಿಐ ಶ್ರೀಧರ ಸತಾರೆ ಅಮಾನತು

ಧಾರವಾಡ: ವಿಧಾನಸಭೆಯ ಸಭಾಪತಿ ಬಸವರಾಜ ಹೊರಟ್ಟಿಯವರ ಮೇಲೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಧಾರವಾಡ ವೃತ್ತ ನಿರೀಕ್ಷಕರಾಗಿದ್ದ ಶ್ರೀಧರ ಸತಾರೆ ಅವರನ್ನ ರಾಜ್ಯದ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಸರ್ವೋದಯ ಶಿಕ್ಷಣ ಸಂಸ್ಥೆಯ ವಿಷಯವಾಗಿ ನಡೆದ ಗಲಾಟೆಗೆ ಸಂಬಂಧಿಸಿದಂತೆ, ಸಭಾಪತಿ ಬಸವರಾಜ ಹೊರಟ್ಟಿಯವರ ಮೇಲೆ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಈ ಸಂಬಂಧ ವಿಧಾನಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಒತ್ತಾಯಿಸಿದ್ದರು.

ರಾಜಧಾನಿಯಲ್ಲಿ ಸಾಕಷ್ಟು ಚರ್ಚೆಯಾಗಿದ್ದೆ ತಡ, ಇಂದು ಸದ್ಯ ಗುಪ್ತವಾರ್ತೆಗೆ ವರ್ಗಾವಣೆಗೊಂಡಿದ್ದ ಶ್ರೀಧರ ಸತಾರೆ ಅವರನ್ನು ಈಗ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button