Breaking NewsLatestರಾಜಕೀಯರಾಷ್ಟ್ರೀಯಸುದ್ದಿ

ರಾಜಸ್ಥಾನದ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ

ಜೈಪುರ: ರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ.

ರಾಜ್ಯದ ಆರು ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯಿತಿಗಳ 1564 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಇದರಲ್ಲಿ 670 ಕಾಂಗ್ರೆಸ್ ಗೆದ್ದುಕೊಂಡಿದೆ. ಬಿಜೆಪಿಯ 551 ಅಭ್ಯರ್ಥಿಗಳು ವಿಜೇತರಾಗಿದ್ದಾರೆ.

ಕಳೆದ 2015ರ ಚುನಾವಣೆಯಲ್ಲಿ 1328 ಸ್ಥಾನಗಳಿಗೆ ಚುನಾವಣೆ ನಡೆದು ಬಿಜೆಪಿ ಬೆಂಬಲಿತ 585 ಅಭ್ಯರ್ಥಿಗಳು ಗೆದ್ದಿದ್ದರು. ಆದರೆ ಈ ಬಾರಿ ಸ್ಥಾನಗಳ ಸಂಖ್ಯೆ ಹೆಚ್ಚಾಗಿದ್ದರೂ ಬಿಜೆಪಿ ಬೆಂಬಲಿತರ ಸಂಖ್ಯೆ ಕುಸಿದಿದೆ. ಉಳಿದಂತೆ ಪಕ್ಷೇತರರು 290, ಆರ್ ಎಲ್ ಪಿ 40, ಬಿಎಸ್ಪಿ 11 ಸ್ಥಾನಗಳಲ್ಲಿ ಗೆದ್ದಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button