Breaking NewsLatestಕಲಬುರ್ಗಿಜಿಲ್ಲಾ ಸುದ್ದಿ
ಗೃಹ ಸಚಿವರ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶಿಸಿ ಕಾಂಗ್ರೆಸ್ ಕಾರ್ಯಕರ್ತರು

ಕಲಬುರಗಿ: ಕೆಪಿಸಿಸಿ ವಕ್ತಾರ ಪ್ರೀಯಾಂಕ ಖರ್ಗೆ ಅವರಿಗೆ ಸಿಐಡಿ ನೋಟಿಸ್ ನೀಡಿದಕ್ಕೆ ಗೃಹಸಚಿವ ಅರಗ ಜ್ಞಾನೇಂದ್ರಗೆ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ..
ಕಲಬುರಗಿ ಪ್ರವಾಸದಲ್ಲಿರುವ ಸಚಿವ ಅರಗ ಜ್ಞಾನೇಂದ್ರ ನಗರದ ಗ್ರಾಂಡ್ ಹೊಟೇಲ್ ಬಳಿ ಬರುತ್ತಿದ್ದಂತೆ ಕಪ್ಪು ಬಟ್ಟೆ ತೋರಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು..
ಮಧ್ಯ ರಾತ್ರಿ ಕಳ್ಳರಂತೆ ಕಲಬುರ್ಗಿಗೆ ಬಂದಿದ್ದಾರೆ. ಪಿಎಸ್ಐ ಅಕ್ರಮದ ಬಗ್ಗೆ ಸ್ವತಾ ಬಿಜೆಪಿ ಮಂತ್ರಿ, ಶಾಸಕರು ಪತ್ರ ಬರೆದರೆ ಅವರಿಗೆ ನೋಟಿಸ್ ನೀಡಿಲ್ಲ ಆದ್ರೆ ಪ್ರೀಯಾಂಕ್ ಖರ್ಗೆ ಅವರಿಗೆ ನೋಟಿಸ್ ನೀಡಿ ಬೇದರಿಸುವ ತಂತ್ರ ಅನುಸರಿಸುತ್ತಿದ್ದಿರಿ ಎಂದು ಆಕ್ರೋಶ ವ್ಯಕ್ತ ಪಡಿಸಿದರು…
