Breaking NewsLatestರಾಷ್ಟ್ರೀಯಸುದ್ದಿ
India Covid Updates : ಭಾರೀ ಇಳಿಕೆ ಕಂಡ ಕೊರೊನಾ : ದೇಶದಲ್ಲಿ ಇಂದು 83 ಸಾವಿರ ಕೇಸ್ ಪತ್ತೆ

ನವದೆಹಲಿ : ಭಾರತದಲ್ಲಿ ಕೊರೊನಾ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 83,876 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 895 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,22,72,014ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,02,874ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,08,938ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 1,99,054 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,06,60,202ಕ್ಕೆ ತಲುಪಿದೆ.
