Breaking NewsLatestರಾಷ್ಟ್ರೀಯಸುದ್ದಿ

ದೇಶದಲ್ಲಿ ಒಂದೇ ದಿನದಲ್ಲಿ 1 ಲಕ್ಷದ 17 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್​​ ಪತ್ತೆ

ನವದೆಹಲಿ: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,17,100 ಕೋವಿಡ್​​ ಪ್ರಕರಣಗಳು ಪತ್ತೆಯಾಗಿವೆ.

ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಈ ಮೂಲಕ ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3,71,363 ಕ್ಕೆ ಏರಿಕೆಯಾಗಿದೆ. ಹಾಗೆಯೇ 302 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,83,178ಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 3,71,363ಕ್ಕೆ ಏರಿಕೆಯಾಗಿದೆ. 30,836 ಮಂದಿ ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್​​​​ ಆಗಿದ್ದಾರೆ. ಒಟ್ಟಾರೆ ಗುಣಮುಖರಾದವರ ಸಂಖ್ಯೆ 3,43,71,845ಕ್ಕೆ ಏರಿದೆ.

ಇನ್ನು ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 3,007ಕ್ಕೆ ಏರಿಕೆಯಾಗಿದ್ದು, ಈ ಪೈಕಿ 1,199ಮಂದಿ ಗುಣಮುಖರಾಗಿದ್ದಾರೆ.

ನಿನ್ನೆ ದೇಶದಲ್ಲಿ 15,13,377 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 94,47,056 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,49,66,81,156 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button