Breaking NewsLatestಮನರಂಜನೆಸಿನಿಮಾಸ್ಯಾಂಡಲ್ ವುಡ್

ಕೆಜಿಎಫ್-2 ಸಿನಿಮಾ ರಿಲೀಸ್ ಗೆ ಕ್ಷಣಗಣನೆ: ವಾರದ ಮುಂಚೆನೇ ಟಿಕೆಟ್ ಸೋಲ್ಡ್ ಔಟ್

KGF ಚಾಪ್ಟರ್ 1 ಪ್ಯಾನ್ ಇಂಡಿಯಾದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಈ ಚಿತ್ರ ಭಾರಿ ಸದ್ದು ಮಾಡಿತ್ತು, ಇದೀಗ KGF ಚಾಪ್ಟರ್ 2 ಭಾರಿ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ರವೀನಾ ಟಂಡನ್, ಸಂಜಯ್ ದತ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ತೆಲುಗು ನಟ ರಾವು ರಮೇಶ್ ಕೂಡಾ ಪ್ರಧಾನ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಹೀಗಾಗಿ ಅಭಿಮಾನಿಗಳು ಸಿನಿಮಾ ಮಾಡಲು ಕಾತುರದಿಂದ ಕಾಯುತ್ತಿದ್ದಾರೆ.

ಇದೇ ತಿಂಗಳು ಏಪ್ರಿಲ್ 14 ರಂದು ವಿಶ್ವದಾದ್ಯಂದ ಈ ಸಿನಿಮಾ ರಿಲೀಸ್ ಆಗುತ್ತಿದೆ. ಇತ್ತೀಚೆಗೆ ಈ ಸಿನಿಮಾದ ಟ್ರೈಲರ್ ರಿಲೀಸ್ ಆಗಿ ಚಿಂದಿ ಉಡಾಯಿಸಿದೆ. ಈಗಾಗಲೇ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಕೆಜಿಎಫ್​ 2 ನೋಡಲು ಇಡೀ ವಿಶ್ವದ ಜನರು ಕಾಯುತ್ತಿದ್ದಾರೆ. ಹೌದು, ಯುಕೆಯಲ್ಲಿ ಕೇವಲ 12 ಗಂಟೆಗಳಲ್ಲಿ 5000 ಸಾವಿರ ಟಿಕೆಟ್​ ಸೋಲ್ಡ್​ಔಟ್​ ಆಗಿದೆ. ಇದನ್ನು ನೋಡಿದರೆ ತಿಳಿಯುತ್ತೆ ರಾಕಿಭಾಯ್​ನ ಹವಾ ಈಗಾಗಲೇ ಶುರುವಾಗಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button