ಮೂರನೇ ಮಗು ಪಡೆಯಲು ದಂಪತಿಗೆ ಉತ್ತೇಜನ: ಚೀನಾ!

ಚೀನಾ: ಹೆಚ್ಚುತ್ತಿರುವ ಜನಸಂಖ್ಯೆಯಿಂದ ಉಂಟಾಗುವ ಸಮಸ್ಯೆಗಳನ್ನುಕಂಟ್ರೋಲ್ ಮಾಡಿದ್ದ ಜನಸಂಖ್ಯೆಯ ನಂ.1 ದೇಶವಾಗಿರುವ ಚೀನಾ ಇದೀಗ ತನ್ನ ವ್ಯಾಖ್ಯಾನವನ್ನು ಬದಲಿಸಿದೆ.
ಈ ಹಿಂದೆ ಚೀನಾ ಒಂದು ಮಗುವು ಸಾಕು ಎಂದುಕಟ್ಟುನಿಟ್ಟಿನ ನಿಯಮ ಜಾರಿ ತಂದಿದ್ದು, ಇದನ್ನು ತಪ್ಪಿದವರಿಗೆ ಕಠಿಣ ಶಿಕ್ಷೆಯನ್ನು ಹೇಳಿತ್ತು. ಆದರೀಗ ಅದನ್ನು ಬದಲಿಸಿದೆ. 2019ರಲ್ಲಿ ಇದ್ದ 140 ಕೋಟಿ ಜನಸಂಖ್ಯೆಗೆ ಹೋಲಿಸಿದರೆ ಕಳೆದ ಒಂದು ವರ್ಷದಲ್ಲಿ ದೇಶದ ಜನಸಂಖ್ಯೆಯಲ್ಲಿ ಕೇವಲ 1 ಕೋಟಿಯಷ್ಟು ಮಾತ್ರವೇ ಏರಿಕೆ ಆಗಿದೆ. ಇದರಿಂದ ಮುಂಬರುವ ವರ್ಷಗಳಲ್ಲಿ ಕಾರ್ಮಿಕರ ಸಮಸ್ಯೆ ಹಾಗೂ ಖರೀದಿ ಸಾಮರ್ಥ್ಯ ಇಳಿಕೆ ಆಗುವ ಅಪಾಯ ಎದುರಾಗಲಿದೆ ಎಂದು ಯೋಚಿಸಿ ಚೀನಾ ಸರ್ಕಾರ ಇದೀಗ ಮೂರನೇ ಮಗುವನ್ನು ಪಡೆಯಲು ದಂಪತಿಗೆ ಉತ್ತೇಜನ ನೀಡುತ್ತಿದೆ.
ಹೀಗಾಗಿ ಚೀನಾದ ರಾಜಧಾನಿ ಬೀಜಿಂಗ್‌ನ ದಬೆನಾಂಗ್ ಟೆಕ್ನಾಲಜಿ ಗ್ರೂಪ್ ಎಂಬ ಖಾಸಗಿ ಸಂಸ್ಥೆ ತಮ್ಮ ಉದ್ಯೋಗಿಗಳಿಗೆ ಆಫರ್ ನೀಡಿದ್ದು, ತಮ್ಮಲ್ಲಿ ಕೆಲಸ ಮಾಡುವ ಪುರುಷ ಅಥವಾ ಮಹಿಳಾ ಉದ್ಯೋಗಿಗಳು ಮೂರನೇ ಮಗು ಪಡೆದರೆ, 90 ಸಾವಿರ ಯುವಾನ್ ನಗದು ಹಣ ಅಂದರೆ, ಭಾರತೀಯ ರೂಪಾಯಿ ಲೆಕ್ಕದಲ್ಲಿ 11 ಲಕ್ಷ ರೂಪಾಯಿಗಳ ಪ್ರೋತಾಹ ಧನ ನೀಡಲಾಗುತ್ತದೆ ಎಂದು ಹೇಳಿದೆ.
ಕಂಪನಿಯು ತನ್ನ ಮಹಿಳಾ ಉದ್ಯೋಗಿಗಳು 3ನೇ ಮಗು ಪಡೆದರೆ ಒಂದು ವರ್ಷ ವೇತನ ಸಹಿತ ರಜೆ ನೀಡುತ್ತದೆ. ಇನ್ನು ಪುರುಷ ಉದ್ಯೋಗಿಗಳಿಗೆ ಒಂಬತ್ತು ತಿಂಗಳು ವೇತನ ಸಹಿತ ರಜೆಯನ್ನು ಕೂಡಾ ನೀಡುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ.
