Breaking NewsLatestರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ಮತ್ತೆ ಹೆಚ್ಚಾದ ಕೋವಿಡ್

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್‌ ಸೋಂಕಿತರು ಮತ್ತೆ ಹೆಚ್ಚಳವಾಗಿದ್ದಾರೆ. ಬುಧವಾರ ಒಂದೇ ದಿನ 5 ಸಾವಿರಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದು, 216 ಮಂದಿ ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದಲ್ಲಿ ಇದುವರೆಗೆ 64,37,500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. 136500ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 50 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಸಕ್ರಿಯ ಪ್ರಕರಣಗಳಿವೆ.

ಕೋವಿಡ್‌ ನಿರ್ವಹಣೆ ಸಡಿಲಿಕೆ ಮಾಡಿರುವುದು ಮತ್ತು ನಿಯಮಗಳನ್ನು ಜನರು ಪಾಲಿಸದಿರುವುದೇ ಸೋಂಕಿತರ ಹೆಚ್ಚಳಕ್ಕೆ ಕಾರಣವಾಗಿದೆ. ಮಾಸ್ಕ್‌ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಡೆಲ್ಟಾ ಪ್ಲಸ್‌ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಮೂರನೇ ಅಲೆಯ ತೀವ್ರತೆ ಮುಂದಿನ ದಿನಗಳಲ್ಲಿ ಹೆಚ್ಚಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಅತ್ತ ಕೇರಳದಲ್ಲೂ ಪಾಸಿಟಿವಿಟಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದ್ದು, ಕರ್ನಾಟಕಕ್ಕೂ ತೀವ್ರತೆ ವ್ಯಾಪಿಸುವ ಆತಂಕ ಎದುರಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button