Breaking Newsರಾಜ್ಯರಾಷ್ಟ್ರೀಯಸುದ್ದಿ

ಕೋವಿಡ್ ಹೆಚ್ಚಳ, ಸಂಸದೀಯ ಸ್ಥಾಯಿ ಸಮಿತಿ ಸಭೆ ರದ್ದು

ನವದೆಹಲಿ: ಸಂಸತ್ತಿನ 400 ರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಕೋವಿಡ್ ತಗುಲಿದೆ. ಜೊತೆಗೆ ದೆಹಲಿಯಲ್ಲಿ ಸೋಂಕು ವ್ಯಾಪಕ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದೀಯ ಸ್ಥಾಯಿ ಸಮಿತಿ ಸಭೆಗಳನ್ನು ರದ್ದುಪಡಿಸಲಾಗಿದೆ. ಸೋಮವಾರ ನಿಗದಿಯಾಗಿದ್ದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯದ ಅಧ್ಯಕ್ಷರು, ನಗರಾಭಿವೃದ್ಧಿ ಮತ್ತು ಪರಿಸರ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿಗಳ ಸಭೆಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಈ ವಾರದ ಕೊನೆಯಲ್ಲಿ ನಿಗದಿಯಾಗಿದ್ದ ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿಯ ಸಭೆಯನ್ನು ರದ್ದುಗೊಳಿಸುವ ನಿರ್ಧಾರ ಸಹ ಇಂದೇ ಹೊರ ಬೀಳುವ ಸಾಧ್ಯತೆಯಿದೆ.
ಲೋಕಸಭೆ 200 ಸಿಬ್ಬಂದಿ ಹಾಗೂ ರಾಜ್ಯಸಭೆಯ 65 ಮತ್ತು ಸಚಿವಾಲಯದ ಇತರೆ ಸಿಬ್ಬಂದಿ ಸೇರಿ 400ರಕ್ಕೂ ಸಿಬ್ಬಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಈ ಬೆಳವಣಿಗೆ ಹಿನ್ನೆಲೆಯಲ್ಲಿ ಎಲ್ಲಾ ಸಂಸದೀಯ ಸ್ಥಾಯಿ ಸಮಿತಿ ಸಭೆ ರದ್ದಪಡಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button