Breaking NewsLatestರಾಷ್ಟ್ರೀಯಸುದ್ದಿ
India Covid Updates: ದೇಶದಲ್ಲಿ ಇಂದು 11 ಸಾವಿರ ಕೊರೊನಾ ಕೇಸ್ ಪತ್ತೆ

ನವದೆಹಲಿ : ದಿನದಿಂದ ದಿನಕ್ಕೆ ಕೊರೊನಾ ಹಾವಳಿ ಕಡಿಮೆಯಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,499 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಸಂದರ್ಭದಲ್ಲಿ 255 ಮಂದಿ ಸಾವನ್ನಪ್ಪಿದ್ದಾರೆ.
ಒಟ್ಟು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 4,29,05,844ಕ್ಕೆ ಏರಿಕೆಯಾಗಿದೆ. ಸಾವನ್ನಪ್ಪಿದವರ ಸಂಖ್ಯೆ 5,13,481ಕ್ಕೆ ಏರಿಕೆಯಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 1,21,881ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 23,598 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,22,70,482ಕ್ಕೆ ತಲುಪಿದೆ.
