Breaking NewsLatestರಾಷ್ಟ್ರೀಯಸುದ್ದಿ
India Covid Updates : ದೇಶದಲ್ಲಿಂದು 1.27 ಲಕ್ಷ ಕೊರೊನಾ ಕೇಸ್ ಪತ್ತೆ

ನವದೆಹಲಿ : ದೇಶದಲ್ಲಿ ಕೊರೊನಾ ಪ್ರಕರಣಗಳು ಇಳಿಕೆಗಿದೆ, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 1,27,952 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದೇ ಸಂದರ್ಭದಲ್ಲಿ 1059 ಮಂದಿ ಸಾವನ್ನಪ್ಪಿದ್ದಾರೆ.
ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,20,80,664ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,01,114 ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 13,31,648ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 2,30,814 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 40,24,2,902 ಕ್ಕೆ ತಲುಪಿದೆ.
ದೇಶದಲ್ಲಿ ಒಂದೇ 16,11,666 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 73,58,04,280 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
