Breaking NewsLatestರಾಷ್ಟ್ರೀಯಸುದ್ದಿ
India Covid Updates: ದೇಶದಲ್ಲಿ ಇಂದು 6561 ಕೊರೊನಾ ಪ್ರಕರಣಗಳು ಪತ್ತೆ

ನವದೆಹಲಿ : ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 6,561 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಸಂದರ್ಭದಲ್ಲಿ 142 ಮಂದಿ ಸಾವನ್ನಪ್ಪಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,45,160ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 514,208ಕ್ಕೆ ಏರಿಕೆಯಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 77,152ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 14,947 ಮಂದಿ ಗುಣಮುಖರಾಗುವುದರೊಂದಿಗೆ ಇಲ್ಲಿಯವರೆಗೂ ಚೇತರಿಸಿಕೊಂಡವರ ಸಂಖ್ಯೆ 4,23,53,620ಕ್ಕೆ ತಲುಪಿದೆ.
