Breaking NewsLatestರಾಷ್ಟ್ರೀಯಸುದ್ದಿ
India Covid Updates : ದೇಶದಲ್ಲಿ ಇಂದು 8 ಸಾವಿರ ಕೊರೊನಾ ಕೇಸ್ ಪತ್ತೆ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮಂದಿಗೆ ಹೊಸದಾಗಿ 8013 ಸಾವಿರ ಕೇಸ್ಗಳು ಪತ್ತೆಯಾಗಿದ್ದು ಇದೇ ಸಂದರ್ಭದಲ್ಲಿ 119 ಮಂದಿ ಸಾವನ್ನಪ್ಪಿದ್ದಾರೆ.
ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 513843ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 102601 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 16765 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42307686 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 4,90,321 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,77,50,86,335 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 7,23,828 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.
