Breaking NewsLatestಕ್ರಿಕೆಟ್ಕ್ರೀಡೆ
ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಸ್ಪಿನ್ನರ್ ಹರ್ಭಜನ್ ಸಿಂಗ್

ನವದೆಹಲಿ: ಭಾರತ ಕ್ರಿಕೆಟ್ ತಂಡದ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹರ್ಭಜನ್ ಸಿಂಗ್ ಅವರು, ಇಂದು ನಾನು ಜೀವನದಲ್ಲಿ ಎಲ್ಲವನ್ನೂ ನೀಡಿದ ಆಟಕ್ಕೆ ವಿದಾಯ ಹೇಳುತ್ತಿದ್ದೇನೆ. ಈ 23 ವರ್ಷಗಳ ಸುದೀರ್ಘ ಪ್ರಯಾಣವನ್ನು ಸುಂದರ ಮತ್ತು ಸ್ಮರಣೀಯಗೊಳಿಸಿದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ನನ್ನ ಹೃತ್ಪೂರ್ವಕ ಧನ್ಯವಾದಗಳು, ಕೃತಜ್ಞತೆ ಎಂಬುದಾಗಿ ತಿಳಿಸಿದ್ದಾರೆ.
1998ರಲ್ಲಿ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ಹರ್ಭಜನ್ ಸಿಂಗ್ ಅವರು ಭಾರತೀಯ ಕ್ರಿಕೆಟ್ ನಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಇವರು 2007ರ ಟಿ-20 ಮತ್ತು 2011ರ ಏಕದಿನ ವಿಶ್ವಕಪ್ ಜಯಸಿದ ಭಾರತ ತಂಡದಲ್ಲಿ ಆಡಿದ್ದರಿದ್ದರು.
ಹರ್ಭಜನ್ ಸಿಂಗ್ 2016 ರಲ್ಲಿ ಟಿ-20 ವಿಶ್ವಕಪ್ ನಲ್ಲಿ ಕೊನೆಯ ಬಾರಿ ಆಡಿದ್ದರು. 103 ಟೆಸ್ಟ್ ಗಳಲ್ಲಿ 417 ವಿಕೆಟ್ ಗಳನ್ನು ಪಡೆದಿದ್ದರು
