Breaking NewsLatestಯಾದಗಿರಿ

ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ: ಯಾದಗಿರಿಯಲ್ಲಿ ಹೃದಯವಿದ್ರಾವಕ ಘಟನೆ

ಯಾದಗಿರಿ: ಒಂದೆ ಕುಟುಂಬದ 6 ಜನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಾಲಬಾಧೆ ತಾಳಲಾರದೆ ನಾಲ್ಕು ಮಕ್ಕಳೊಂದಿಗೆ ನೀರಿನ ಹೊಂಡಕ್ಕೆ ಹಾರಿ ಪೊಷಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ತಂದೆ ಭೀಮರಾಯ ಸುರಪುರ, ತಾಯಿ ಶಾಂತಮ್ಮ ತನ್ನ ನಾಲ್ಕು ಮಕ್ಕಳಾದ ಸುಮಿತ್ರಾ, ಶ್ರೀದೇವಿ, ಲಕ್ಷ್ಮೀ ಹಾಗೂ ಶಿವರಾಜ ನಾಲ್ಕು ಮಕ್ಕಳೊಂದಿಗೆ ಆತ್ಮಹತ್ಯೆ ನೀರಿನ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.

ಸ್ಥಳಕ್ಕೆ ಶಹಾಪುರ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿದ್ದು, ನಾಲ್ವರ ಶವ ಈಗಾಗಲೇ ಹೊರ ತೆಗೆಯಲಾಗಿದ್ದು, ಇಬ್ಬರ ಶವಕ್ಕೆ ಹುಡುಕಾಟ ನಡೆದಿದೆ. ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Spread the love

Related Articles

Leave a Reply

Your email address will not be published. Required fields are marked *

Back to top button