Breaking NewsLatestಕ್ರೈಂಜಿಲ್ಲಾ ಸುದ್ದಿರಾಜ್ಯಸುದ್ದಿಹುಬ್ಬಳ್ಳಿ - ಧಾರವಾಡ
ರೈಲ್ವೆ ಪೊಲೀಸರಿಗೆ ಸಿಕ್ಕಿಬಿದ್ದ ಕಿಲಾಡಿ ಕಳ್ಳ! ಚಲಿಸುತ್ತಿದ್ದ ರೈಲಿನಲ್ಲಿ ಚಾಕು ಇರಿದು ಹಣ ಕದ್ದಿದ್ದ!!

ಹುಬ್ಬಳ್ಳಿ: ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ಚಾಕುವಿನಿಂದ ಇರಿದು ಹಣ ಹಾಗೂ ಮೊಬೈಲ್ ಫೋನ್ ಕಸಿದುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ರೈಲ್ವೇ ಪೊಲೀಸರು ಯಶಸ್ವಿಯಾಗಿದ್ದಾರೆ.
ಹಳೇ ಹುಬ್ಬಳ್ಳಿ ನೂರಾನಿ ಗ್ರೌಂಡ್ ನಿವಾಸಿ ಮಹಮ್ಮದ್ ರಫೀಕ್ ಅಲಿಯಾಸ್ ಕಲಾ ಅಬುಲ್ ರಜಾಕ್ ಮುಲ್ಲಾ (25) ಬಂಧಿತ ಆರೋಪಿ. ಕಳೆದ ಫೆಬ್ರವರಿ 23ರಂದು ರಾತ್ರಿ ಬೆಳಗಾವಿ-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಧಾರವಾಡದ ಆರ್.ಜೆ.ಬೆಟಸೂರ ಅವರಿಗೆ ಚಾಕುವಿನಿಂದ ಇರಿದು, ಹಣ, ಮೊಬೈಲ್ ಕಿತ್ತುಕೊಂಡು ಯಲವಿಗಿ ನಿಲ್ದಾಣದಲ್ಲಿ ಕಳ್ಳ ಇಳಿದು ಪರಾರಿಯಾಗಿದ್ದ.
ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ಬಹುತೇಕ ಕಡೆಗಳಲ್ಲಿ ರೈಲ್ವೇ ಪ್ರಯಾಣಿಕರಿಂದ ಪ್ರಕರಣಗಳು ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಹುಬ್ಬಳ್ಳಿ ನೈರುತ್ಯ ರೈಲ್ವೇ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನುಳಿದವರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
