
ನವದೆಹಲಿ: ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಸರ್ಕಾರ ವೆಚ್ಚದಲ್ಲಿ ಸ್ವದೇಶಕ್ಕೆ ಕರೆತರಲಾಗುವುದು ಎಂದು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಹೇಳಿದ್ದಾರೆ.
ಉತ್ತರ ಪ್ರದೇಶದ ಬರಿಯಾದಲ್ಲಿ ಚುನಾವಣೆ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಉದ್ದೇಶಕ್ಕಾಗಿ ಉಕ್ರೇನ್ ನ ನೆರೆಯ ದೇಶಗಳಿಗೆ ವಿಮಾನಗಳ ಸಂಖ್ಯೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಆಯಾ ದೇಶಗಳ ಅನುಮತಿ ಕೋರಲಾಗುವುದು ಎಂದು ತಿಳಿಸಿದರು. ಉಕ್ರೇನ್ ನಲ್ಲಿ ಸಿಲುಕಿರುವ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಅವರ ತಾಯ್ನಾಡಿಗೆ ಕರೆತರಲಾಗುವುದು ಮತ್ತು ವಿಮಾನಗಳ ಎಲ್ಲಾ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸಲಿದೆ ಎಂದರು. ಭಾರತ ಶಾಂತಿಪ್ರಿಯ ದೇಶ ರಕ್ಷಣಾ ವಿಭಾಗ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದೆ ಮತ್ತು ಭಾರತ ವಿಶ್ವದ್ಯಾಂತ ಶಾಂತಿಯನ್ನು ಪುನರ್ ಸ್ಥಾಪಿಸಲು ಬಯಸುತ್ತದೆ ಎಂದರು. ಭಾರತವು ಶಾಂತಿಪ್ರಿಯವಾಗಿದೆ. ಭಾರತ ಎಂದಿಗೂ ಯಾವುದೇ ದೇಶದ ಮೇಲೆ ದಾಳಿ ಮಾಡಿಲ್ಲ ಮತ್ತು ಇನ್ನೊಂದು ದೇಶದ ಭೂಮಿಯನ್ನು ಕಿತ್ತುಕೊಂಡಿಲ್ಲ. ನಾವು ವಿಶ್ವಶಾಂತಿಯನ್ನು ಬಯಸುತ್ತೇವೆ ಮತ್ತು ಎಲ್ಲರೂ ಅದನ್ನು ಒಪ್ಪಿಕೊಳ್ಳಬೇಕು" ಎಂದು ರಾಜನಾಥ್ ಸಿಂಗ್ ಹೇಳಿದರು.
