Breaking Newsರಾಜಕೀಯರಾಷ್ಟ್ರೀಯ

ಸಂಪುಟದಿಂದ ಅಜಯ್ ಮಿಶ್ರಾ ವಜಾಕ್ಕೆ ಆಗ್ರಹ

ನವದೆಹಲಿ: ರಾಜ್ಯಸಭಾ ಸಂಸದರ ಅಮಾನತು ರದ್ದುಗೊಳಿಸುವಂತೆ ಹಾಗೂ ಕೇಂದ್ರದ ಸಹಾಯಕ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಲು ಆಗ್ರಹಿಸಿ ಪ್ರತಿಪಕ್ಷದಿಂದ ವಿಜಯಚೌಕದಲ್ಲಿ ಪ್ರತಿಭಟನಾ ಜಾಥಾ ನಡೆಯಿತು.

ಈ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿ, ನಾವೆಲ್ಲಾ ಸಂಘಟಿತ ಹೋರಾಟ ನಡೆಸುತ್ತಿದ್ದೇವೆ. ರೈತರ ಹತ್ಯೆ ಯೋಜಿತ ಪಿತೂರಿಯಾಗಿದೆ. ರೈತರ ವಿರುದ್ಧದ ಹಿಂಸಾಚಾರಕ್ಕೆ ಕಾರಣವಾಗಿರುವವರನ್ನು ಕಾನೂನಿನ ಅಡಿಗೆ ತರಬೇಕು ಎಂದು ಒತ್ತಾಯಿಸಿದರು.

ಆತ ಯಾರ ಪುತ್ರ ಎಂಬ ಬಗ್ಗೆ ಹಾಗೂ ಆತನ ರಕ್ಷಣೆ ಮಾಡುತ್ತಿರುವ ಬಗ್ಗೆ ಪ್ರತಿಯೊಬ್ಬರಿಗೂ ತಿಳಿದಿದೆ ಎಂದು ಕೇಂದ್ರದ ಸಹಾಯಕ ಸಚಿವ ಅಜಯ್ ಮಿಶ್ರಾ ಹಾಗೂ ಪುತ್ರ ಆಶಿಶ್ ಮಿಶ್ರಾನನ್ನು ಉಲ್ಲೇಖಿಸಿ ಮಾತನಾಡಿದರು.

Spread the love

Related Articles

Leave a Reply

Your email address will not be published. Required fields are marked *

Back to top button