Breaking NewsLatestರಾಜ್ಯಸುದ್ದಿ

ಧರ್ಮ ದಂಗಲ್‌ಗೂ ಬಿಜೆಪಿಗೂ ಸಂಬಂಧವಿಲ್ಲ: ನಳಿನ್‌ ಕುಮಾರ್‌ ಕಟೀಲ್‌

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಳಿನ್‌ ಕುಮಾರ್‌ ಕಟೀಲ್‌ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಾಗುವುದು. ಕೇಂದ್ರ ಗೃಹ ಮಂತ್ರಿ ಅಮಿತ್‌ ಶಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಆದರೆ, ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆಯಲ್ಲ. ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಮುಖ್ಯಮಂತ್ರಿ ಅವರ ಪರಮಾಧಿಕಾರ. ಈ ಬಗ್ಗೆ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ. ಇದರಲ್ಲಿ ಪಕ್ಷದ ನಾಯಕರು ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಸಮಾಜದಲ್ಲಿ ನಡೆಯುತ್ತಿರುವ ಧರ್ಮ ದಂಗಲ್‌ಗೂ ಬಿಜೆಪಿಗೂ ಸಂಬಂಧವಿಲ್ಲ. ಬಿಜೆಪಿ ಸಬ್‌ಕಾ ಸಾಥ್‌, ಸಬ್‌ ಕಾ ವಿಕಾಸ ಬಗ್ಗೆ ಚಿಂತನೆ ನಡೆಸುತ್ತದೆ. ಸಣ್ಣಪುಟ್ಟ ವ್ಯತ್ಯಾಸಗಳು ಅಲ್ಲಲ್ಲಿ ಕಂಡು ಬರುತ್ತಿವೆ. ಎಲ್ಲವನ್ನೂ ಸರಿಪಡಿಸಲಾಗುವುದು. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲಾಗುವುದು. ಪ್ರಧಾನಿ ಮೋದಿ ಅವರ ಆಡಳಿತಾವಧಿಯಲ್ಲಿ ಕೋಮುಗಲಭೆ, ಭಯೋತ್ಪಾದನೆ, ನಕ್ಸಲ್‌ ಚಟುವಟಿಕೆಗೆ ಕಡಿವಾಣ ಹಾಕಲಾಗಿದೆ ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button