Breaking NewsLatestಜಿಲ್ಲಾ ಸುದ್ದಿರಾಜ್ಯಸಾಹಿತ್ಯ / ಸಂಸ್ಕೃತಿಸುದ್ದಿಹುಬ್ಬಳ್ಳಿ - ಧಾರವಾಡ

ಡಾ.ಚನ್ನವೀರ ಕಣವಿ ಆರೋಗ್ಯದಲ್ಲಿಏರುಪೇರು: ಚಿಕಿತ್ಸೆ ಮುಂದುವರಿಕೆ

ಧಾರವಾಡ: ಕೊರೊನಾ ಸೋಂಕಿಗೆ ತುತ್ತಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಡಾ.ಚನ್ನವೀರ ಕಣವಿ ಅವರ ಆರೋಗ್ಯದಲ್ಲಿ ಮಂಗಳವಾರ ತುಸು ಏರುಪೇರು ಉಂಟಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ. ಚನ್ನವೀರ ಕಣವಿ ಅವರ ದೇಹದಲ್ಲಿ ಆಮ್ಲಜನಕ ಪ್ರಮಾಣ ಕುಗ್ಗಿದ್ದರಿಂದ ಮಂಗಳವಾರ ಅದರ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಈಗ ಡಾ.ಕಣವಿ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಜಿಲ್ಲಾಡಳಿತ, ಎಸ್​ಡಿಎಂ ಆಸ್ಪತ್ರೆಯ ಆಡಳಿತ ಮಂಡಳಿ ಕ್ರಮಕೈಗೊಂಡಿದೆ.

ವೈದ್ಯರೊಂದಿಗೆ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದ್ದು, ಡಾ.ಕಣವಿ ಅವರ ಆರೋಗ್ಯ ಮಾಹಿತಿಯನ್ನು ಜಿಲ್ಲಾಡಳಿತ ಪಡೆದುಕೊಳ್ಳುತ್ತಿದ್ದು, ಹಿರಿಯ ಕವಿ ಡಾ.ಕಣವಿ ಅವರು ಬೇಗ ಗುಣಮುಖರಾಗಲಿ ಎಂದು ಜಿಲ್ಲಾಡಳಿತ ಪ್ರಾರ್ಥಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button