Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಪ್ಯಾರಾ ಮಿಲಿಟರಿ ಪ್ರದೇಶದಲ್ಲಿ ಡ್ರೋನ್ ಹಾರಾಟ : `FIR’ ದಾಖಲು

ಬೆಂಗಳೂರು : ಬೆಂಗಳೂರಿನ ಪ್ಯಾರಾ ಮಿಲಿಟರಿ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಡ್ರೋನ್ ಹಾರಾಟ ನಡೆಸಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ಸೇನಾಧಿಕಾರಿಗಳು ದೂರು ದಾಖಲಿಸಿದ್ದಾರೆ.

ನವೆಂಬರ್ 9 ರಂದು ಬೆಂಗಳೂರಿನ ಜೆ.ಸಿ.ನಗರದ ಚಿನ್ನಪ್ಪ ಗಾರ್ಡನ್ ನಲ್ಲಿರುವ ಪ್ಯಾರಾ ಮಿಲಿಟರಿ ಕ್ಯಾಂಪ್ ನಲ್ಲಿ ಸಂಜೆ 6.30 ರಿಂದ 7 ರ ಅವಧಿಯಲ್ಲಿ ಡ್ರೋನ್ ಹಾರಾಟ ನಡೆಸಿತ್ತು. ಇದನ್ನು ಸೇನಾಧಿಕಾರಿಗಳು ಗಮನಿಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸದ್ಯ ಪೊಲೀಸರು ನಿರ್ಬಂಧಿತ ಮಿಲಿಟರಿ ಭೂ ಪ್ರದೇಶದಲ್ಲಿ ಡ್ರೋನ್ ಹಾರಾಟ ನಡೆಸಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button