Breaking Newsಜಿಲ್ಲಾ ಸುದ್ದಿಬಾಗಲಕೋಟೆ
ಬಾಗಲಕೋಟೆ: ಆಸ್ತಿ ವಿವಾದ ಹಿನ್ನೆಲೆ – ನಾಲ್ವರ ಹತ್ಯೆ

ಬಾಗಲಕೋಟೆ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ಮಧ್ಯೆ ನಡೆದ ಗಲಾಟೆಯಲ್ಲಿ ನಾಲ್ಕು ಜನ ಸಹೋದರ ಹತ್ಯೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮದರಖಂಡಿ ಗ್ರಾಮದಲ್ಲಿ ಬರ್ಬರ ಹತ್ಯೆ ನಡೆದಿದ್ದು, ಏಕಾಏಕಿ ಬಂದಿರುವ ತಂಡ ಮದರಖಂಡಿಯ ಹನಮಂತ (47), ಮಲ್ಲಪ್ಪ(45), ಈಶ್ವರ (40) ಹಾಗೂ ಬಸವರಾಜ(37) ಕೊಲೆಯಾದ ಸಹೋದರರಾಗಿದ್ದು, ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
