Breaking NewsLatestರಾಷ್ಟ್ರೀಯಸುದ್ದಿ
ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ಹೊಸದಿಲ್ಲಿ: ನಟಿ ರಾಕುಲ್ ಪ್ರೀತ್ ಸಿಂಗ್ ಅವರಿಗೆ ಡ್ರಗ್ ಸಂಬಂಧಿಸಿದ ಅಕ್ರಮ ಹಣ ವರ್ಗವಾಣೆ ಪ್ರಕರಣ ವಿಚಾರದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಸಮನ್ಸ್ ಜಾರಿ ಮಾಡಿದೆ.
ಈ ಹಿಂದೆ ಈ ಪ್ರಕರಣದಲ್ಲಿ ತೆಲುಗು ಚಿತ್ರರಂಗದ ಇತರ ಕೆಲವರನ್ನು ಪ್ರಶ್ನಿಸಿರುವ ಸಂಸ್ಥೆ ಸೋಮವಾರ ಆಕೆಗೆ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವರ ಜೊತೆಗೆ ಇತ್ತೀಚೆಗೆ ಶಾಸಕ ಖರೀದಿ ಪ್ರಕರಣದಲ್ಲಿ ದೂರುದಾರರಾಗಿದ್ದ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಶಾಸಕ ಪೈಲಟ್ ರೋಹಿತ್ ರೆಡ್ಡಿ ಅವರನ್ನೂ ವಿಚಾರಣೆಗೆ ಕರೆಯಲಾಗಿದೆ.
ಮೂರು ದಿನಗಳ ಹಿಂದೆಯಷ್ಟೇ ರೋಹಿತ್ ರೆಡ್ಡಿ ಹೇಳಿಕೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ದಾಖಲಿಸಿಕೊಂಡಿತ್ತು.
