Breaking NewsLatestರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಚುನಾವಣೆಯಲ್ಲಿ ಒಂದೂ ಪಕ್ಷವೂ ಗೆಲ್ಲದ ಓವೈಸಿಗೆ ಮುಂದಿನ ಎಲೆಕ್ಷನ್ ಗೆಲುವಿನ ನಿರೀಕ್ಷೆ

ಉತ್ತರ ಪ್ರದೇಶ ಚುನಾವಣೆಯಲ್ಲಿ 100 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಅಸಾದುದ್ದೀನ್ ಓವೈಸಿಯ ಆಲ್ ಇಂಡಿಯಾ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನಿ ಪಕ್ಷ ಒಂದೇ ಒಂದು ಕ್ಷೇತ್ರದಲ್ಲೂ ಗೆಲುವು ಸಾಧಿಸಿಲ್ಲ. ಎಐಎಂಐಎಂ ಪಕ್ಷ ಭಾಗಿದಾರಿ ಪರಿವರ್ತನ್ ಮೋರ್ಚಾದೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿತ್ತು. ಆದರೆ ಓವೈಸಿ ಚುನಾವಣಾ ತಂತ್ರಗಾರಿಕೆ ಯಾವುದೇ ಪ್ರಯೋಜನಕ್ಕೆ ಬಂದಿಲ್ಲ.

ಉತ್ತರ ಪ್ರದೇಶದ ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ಅಸಾದುದ್ದೀನ್ ಓವೈಸಿ ನಾವು ಜನಾದೇಶವನ್ನು ಒಪ್ಪಿಕೊಳ್ಳುತ್ತೇವೆ. ಸೋತ ರಾಜಕೀಯ ಪಕ್ಷಗಳು ತಮ್ಮ ಸೋಲಿಗೆ ಇವಿಎಂ ಯಂತ್ರವನ್ನು ಹೊಣೆ ಮಾಡಲು ಯತ್ನಿಸುತ್ತಿವೆ. ಆದರೆ ಖಂಡಿತ ಇದು ಇವಿಎಂ ದೋಷದಿಂದ ಆದ ಸೋಲಲ್ಲ. ಜನರ ಮನಸ್ಸಿನಲ್ಲಿರುವ ಚಿಪ್ ನಿಂದ ಹೊರ ಬಂದ ಫಲಿತಾಂಶ ಎಂದಿದ್ದಾರೆ.

ನಾವು ನಾಳೆಯಿಂದ ನಮ್ಮ ಕೆಲಸದಲ್ಲಿ ತೊಡಗುತ್ತೇವೆ. ಮುಂದಿನ ಚುನಾವಣೆಯಲ್ಲಿ ಖಂಡತ ನಮ್ಮ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದೆ. ಯುಪಿಯಲ್ಲಿ ಅಲ್ಪಸಂಖ್ಯಾತರನ್ನು ಮತಬ್ಯಾಂಕ್ ಗಳಾಗಿ ಬಳಸಿಕೊಳ್ಳಲಾಗುತ್ತಿದೆ. ಲಖಿಂಪುರ ಖೇರಿ ಹಿಂಸಾಚಾರದಲ್ಲಿ ರೈತರ ಮೇಲೆ ಕಾರು ಹರಿಸಿದ್ದು ಬಿಜೆಪಿ ಸಚಿವರ ಪುತ್ರನೇ ಆದರೂ ಅಲ್ಲಿಯೂ ಬಿಜೆಪಿಯೇ ಗೆದಿದ್ದೆ. ಇಲ್ಲಿ ಕೆಲಸ ಮಾಡುತ್ತಿರುವುದು 80-20ರ ನಿಯಮವಷ್ಟೇ ಎಂದಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button