Breaking NewsLatestಕ್ರೈಂಚಿಕ್ಕಮಗಳೂರುಜಿಲ್ಲಾ ಸುದ್ದಿರಾಜ್ಯಸುದ್ದಿ
ತೋಟದಲ್ಲಿ ಕೆಲಸ ಮಾಡುವಾಗ ಕಾಡಾನೆ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುವಾಗ ಕಾಡಾನೆ ದಾಳಿ ಮಾಡಿ, ಓರ್ವ ಮಹಿಳೆ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯಿಂದಾಗಿ ಓರ್ವ ಮಹಿಳೆ ಮೃತಪಟ್ಟರೆ ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ

ಸರೋಜ ಬಾಯಿ (45) ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದು, ದುಗ್ಗಪ್ಪ ಎಂಬಾತ ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಳು ಮೆಣಸು ಕೊಯ್ಯಲು ತೆರಳಿದ್ದಾಗ ಈ ದುರಂತ ಘಟನೆ ನಡೆದಿದ್ದು, ಚಿಕ್ಕಮಗಳೂರು ತಾಲೂಕಿನ ಕೆಳಗೂರಿನಲ್ಲಿ ದುರಂತ ಸಂಭವಿಸಿದೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾಡಾನೆ ದಾಳಿಯಿಂದಾಗಿ ತೋಟದಲ್ಲಿ ಕೆಲಸ ಮಾಡುವವರಲ್ಲಿ ಆತಂಕ ಹೆಚ್ಚಾಗಿದೆ.
