Breaking NewsLatestರಾಜ್ಯಸುದ್ದಿ
ನಾಳೆ IPS ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಮೊನ್ನೆಯಷ್ಟೆ ತನ್ನ ಹುದ್ದೆಗೆ ರಾಜೀನಾಮೆ ನೀಡಿದ ಭಾಸ್ಕರ್ ರಾವ್ ಇದೀಗ ರಾಜಕೀಯದ ಕಡೆ ಮುಖ ಮಾಡುತ್ತಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಲಿರುವ ಬಗ್ಗೆ ಮಾಹಿತಿ ದೊರತಿದೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್ಗೆ ಸೇರ್ಪಡೆ ಆಗಲಿದ್ದಾರೆ. ಆಪ್ ಸೇರ್ಪಡೆ ಬಳಿಕ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಲಿದ್ದು, ನಾಳೆ ಮಧ್ಯಾಹ್ನ 1 ಗಂಟೆಗೆ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
