Breaking NewsLatestಜಿಲ್ಲಾ ಸುದ್ದಿದಾವಣಗೆರೆರಾಜ್ಯಸುದ್ದಿ

ಹಿಜಾಬ್ ವಿವಾದ; ಚನ್ನಗಿರಿಯ ನಲ್ಲೂರಿನಲ್ಲಿ ಗುಂಪು ಘರ್ಷಣೆ : ಮೂವರಿಗೆ ಗಾಯ

ದಾವಣಗೆರೆ: ಹಿಜಾಬ್ ಹಾಗೂ ಕೇಸರಿ ಶಾಲು ಸಮರ ತಾರಕಕ್ಕೇರುತ್ತಿದ್ದು, ಅಡಿಕೆ ನಾಡು ಚನ್ನಗಿರಿಗೂ ಕಾಲಿಟ್ಟಿದೆ. ಎರಡು ಗುಂಪುಗಳ ನಡುವೆ ಮಾರಾಮಾರಿ ಆಗಿದ್ದು, ಮೂವರು ಗಾಯಗೊಂಡ ಘಟನೆ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ.

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಲಾಗಿದೆ ಎಂದು ಆರೋಪಿಸಿ ಒಂದು ಕೋಮಿನ ಗುಂಪು ಯುವಕನ ಮನೆ ಮೇಲೆ ದಾಳಿ ಮಾಡಿ ಹಲ್ಲೆ ಮಾಡಿದೆ. ಈ ವೇಳೆ ವೃದ್ದೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮನೆಯೊಂದಕ್ಕೆ ನುಗ್ಗಿದ ವೇಳೆ ಮಾತಿನ ಚಕಮಕಿ ನಡೆದಿದೆ. ಬಳಿಕ ವಿಕೋಪಕ್ಕೆ ತಿರುಗಿ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಲಾಗಿದೆ. ಗಲಾಟೆ ವೇಳೆ ವೃದ್ದೆ ಗಂಭೀರವಾಗಿ ಗಾಯಗೊಂಡಿದ್ದು, ಹಲ್ಲೆಗೊಳಗಾದವರನ್ನು ಚನ್ನಗಿರಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಂತರ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದು, ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ. ನಂತರ ಎರಡು ಕೋಮಿನ ಮುಖಂಡರನ್ನು ಕರೆಸಿ ಸಭೆ ನಡೆಸಿದ ಪೊಲೀಸರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ‌.

Spread the love

Related Articles

Leave a Reply

Your email address will not be published. Required fields are marked *

Back to top button