Breaking NewsLatestರಾಜ್ಯಸುದ್ದಿ
ವಾಟಾಳ್ ನಾಗರಾಜ್ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ FIR

ಬೆಂಗಳೂರು: ಎಂಇಎಸ್ ನಿಷೇಧ ಮಾಡುವಂತೆ ಒತ್ತಾಯಿಸಿ ಏಕಾಂಗಿ ಪ್ರತಿಭಟನೆ ನಡೆಸಿದ್ದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಮಾರ್ಚ್ 18ರಂದು ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿ ವಾಟಾಳ್ ನಾಗರಾಜ್ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದರು. ನ್ಯಾಯಾಲಯದ ಆದೇಶದಂತೆ ಪ್ರತಿಭಟನೆಗೆ ಫ್ರೀಡಂ ಪಾರ್ಕ್ ಸ್ಥಳ ನಿಗದಿಯಾಗಿದ್ದರು, ಅದನ್ನ ಉಲ್ಲಂಘಿಸಿ ಬೇರೆಡೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.
