Breaking NewsLatestರಾಷ್ಟ್ರೀಯ
ಭೋಪಾಲ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; ನಾಲ್ಕು ನವಜಾತ ಶಿಶುಗಳ ಸಾವು

ಭೋಪಾಲ್: ಮಧ್ಯಪ್ರದೇಶದ ಭೋಪಾಲ್ನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ಕು ನವಜಾತ ಶಿಶುಗಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಕಮಲಾ ನೆಹರೂ ಮಕ್ಕಳ ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನವಜಾತ ಶಿಶುಗಳ ನಿಗಾ ಘಟಕದಲ್ಲಿನ ಅನಾಹುತ ನಾಲ್ಕು ಶಿಶುಗಳನ್ನು ಬಲಿ ಪಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ನಿನ್ನೆ ರಾತ್ರಿ 9 ಗಂಟೆಯ ವೇಳೆಗೆ ಆಸ್ಪತ್ರೆಯ ಮೂರನೇ ಮಹಡಿಯ ವಾರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡಿತೆನ್ನಲಾಗಿದೆ.
