ಉಕ್ರೇನ್ ವಿಶ್ವವಿದ್ಯಾಲಯಗಳಿಂದ ಆಲ್ ಲೈನ್ ಕ್ಲಾಸ್: ನಿರಾಳರಾದ ಭಾರತೀಯ ವಿದ್ಯಾರ್ಥಿಗಳು

ನವದೆಹಲಿ: ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧದಿಂದಾಗಿ ಉಕ್ರೇನ್ ನಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು ಕರ್ನಾಟಕಕ್ಕೆ ವಾಪಸ್ಸಾಗಿದ್ದಾರೆ. ಅರ್ಧಂಬರ್ಧ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಏನು ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಕಂಗಾಲಾಗಿದ್ದರು. ಇದೀಗ ನೆಮ್ಮದಿಯ ವಿಷಯವೊಂದು ಹೊರ ಬಿದ್ದಿದೆ.
ಯುದ್ಧ ಪೀಡಿತ ಉಕ್ರೇನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ನಂತರ ಮುಂದಿನ ಭವಿಷ್ಯದ ಭಯದಲ್ಲಿದ್ದ ಭಾರತೀಯ ವಿದ್ಯಾರ್ಥಿಗಳಿಗೆ ಉಕ್ರೇನ್ ನ ಕೆಲವು ವೈದ್ಯಕೀಯ ವಿಶ್ವವಿದ್ಯಾಲಯಗಳು ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಿದ್ದು ಕೊಂಚ ನಿರಾಳ ತಂದಿದೆ. ೀ ಮಧ್ಯೆಯೂ ಪ್ರಾಯೋಗಿಕ ತರಗತಿಗಳಿಗೆ ಹಾಜರಾಗಲು ಸಾಧ್ಯವಿಲ್ಲದಿರುವುದಕ್ಕೆ ಕೆಲವು ವಿದ್ಯಾರ್ಥಿಗಳು ಚಿಂತೆಗೀಡಾಗಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ನಿರಂತರ ಶೆಲ್ ದಾಳಿ ನಡೆಸುತ್ತಿದ್ದು ಉಕ್ರೇನ್‌ನಲ್ಲಿ ದೈಹಿಕ ತರಗತಿಗಳನ್ನು ನಡೆಸುವುದು ಅಸಾಧ್ಯವಾದ ಕಾರಣ, ಪಶ್ಚಿಮ ಉಕ್ರೇನ್‌ನಲ್ಲಿರುವ ಹಲವಾರು ವೈದ್ಯಕೀಯ ವಿಶ್ವವಿದ್ಯಾಲಯಗಳು ಸೋಮವಾರದಿಂದ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಿವೆ.
ಮುಂದಿನ ದಿನಗಳಲ್ಲಿ ಇತರ ವಿಶ್ವವಿದ್ಯಾಲಯಗಳು ಆನ್‌ಲೈನ್ ತರಗತಿಗಳನ್ನು ಪುನರಾರಂಭಿಸಲು ಯೋಜಿಸಿವೆ. ಜೊತೆಗೆ ಶೆಲ್ ದಾಳಿಯ ನಡುವೆ ಶಿಕ್ಷಕರು ತಮ್ಮ ಮನೆ ಅಥವಾ ಸುರಕ್ಷಿತ ಸ್ಥಳಗಳಿಂದ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎನ್ನಲಾಗ್ತಿದೆ.
