Breaking Newsಜಿಲ್ಲಾ ಸುದ್ದಿರಾಜ್ಯಹುಬ್ಬಳ್ಳಿ - ಧಾರವಾಡ

ಮಾಜಿ‌ ಸಚಿವ ವಿನಯ್ ಕುಲಕರ್ಣಿ ಅರ್ಜಿ ವಿಚಾರಣೆ ಜುಲೈ 8ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ: ಧಾರವಾಡದ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಗೌಡರ ಹತ್ಯೆ ಪ್ರಕರಣದಲ್ಲಿ, ಬಂಧನವಾಗಿ ಸದ್ಯ ಬೆಳಗಾವಿ ಹಿಂಡಲಗಾ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅರ್ಜಿ ವಿಚಾರಣೆಯನ್ನು ಇಂದು (ಜೂನ್ 29) ನಡೆಸಿದ ಸುಪ್ರೀಂಕೋರ್ಟ್ ಜುಲೈ 8ಕ್ಕೆ ಮುಂದೂಡಿದೆ ಆದೇಶ ಹೋರಡಿಸಿದೆ.

ಸುಪ್ರೀಂ ಕೋರ್ಟ್​ನ ತ್ರಿಸದಸ್ಯ ಪೀಠದ ಗೌರವಾನ್ವಿತ ನ್ಯಾಧೀಶರಾದ ಎ ಎಂ ಖಾನ್​​ವಿಲ್​​​ಕರ್, ದಿನೇಶ್ ಮಹೇಶ್ವರಿ, ಅನಿರುದ್ಧ ಬೋಸ್ ನೇತ್ರತ್ವದ ಪೀಠವು, ಕರ್ನಾಟಕ ಸರ್ಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಲಾಗಿದೆ. ಇದೇ ವೇಳೆ ವಿನಯ್ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಅವರು ಪ್ರತ್ಯೇಕವಾಗಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಕೂಡ ಈ ಪ್ರಕರಣದೊಂದಿಗೆ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಈ ಹಿಂದೆ ರಾಜ್ಯ ಸರ್ಕಾರ ಹಾಗೂ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಕೂಡ ಇದರೊಂದಿಗೆ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಆ ಮೂಲಕ ಸುಪ್ರೀಂಕೋರ್ಟ್ ಮುಂದೆ ವಿನಯ್ ಕುಲಕರ್ಣಿ ಪರ ವಕೀಲರ ವಾದ, ಕರ್ನಾಟಕ ಸರ್ಕಾರದ ಅಡ್ವೋಕೇಟ್ ಜನರಲ್ ವಾದ ಹಾಗೂ ಸಿಬಿಐ ಪರ ವಕೀಲರ ಪ್ರತಿವಾದ ತೀವ್ರ ಕುತೂಹಲ ಕೆರಳಿಸಿದೆ. ಇದರ ಮೇಲೆ ಅವರ ಅರ್ಜಿ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಂದು ಅಂಗೀಕಾರವಾಗಲಿದೆಯೇ ಇಲ್ಲವೇ ಎಂಬುದನ್ನು ಸುಪ್ರೀಂಕೋರ್ಟ್ ಜು. 8 ರಂದು ನಿರ್ಧರಿಸಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button