Breaking NewsLatestರಾಷ್ಟ್ರೀಯಸುದ್ದಿ

ಗೋವಾದಲ್ಲಿ ಆಗಸ್ಟ್ 30 ರವರೆಗೆ ಕರ್ಫ್ಯೂ ಮುಂದುವರಿಕೆ

ಕಾರವಾರ : ಗೋವಾ ರಾಜ್ಯದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಕಾಲಾವಧಿಯನ್ನು ಆಗಸ್ಟ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಭಾಗದ ಕಾರವಾರದ ಮಾಜಾಳಿ – ಗೋವಾ ಭಾಗದಲ್ಲೂ ಪ್ರವಾಸಿಗರಿಗೆ ನಿರ್ಬಂಧಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ.

ಗೋವಾದ ಚಿತ್ರಮಂದಿರಗಳಲ್ಲಿ ಶೇ.50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವ ಮೂಲಕ ಚಿತ್ರಮಂದಿರ ತೆರೆಯಲು ಅನುಮತಿ ನೀಡಲಾಗಿದೆ.

ಗೋವಾ ರಾಜ್ಯದಲ್ಲಿ ಕೋವಿಡ್‌ ಹರಡುವುದನ್ನು ತಡೆಯಲು ಮಾರ್ಚ್ ತಿಂಗಳಿಂದ ಜಾರಿಗೊಂಡಿದ್ದ ಕರ್ಫ್ಯೂವನ್ನು ಹಂತ ಹಂತವಾಗಿ ಅವಧಿ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಇಂದು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇನ್ನೂ ಒಂದು ವಾರಗಳ ಕಾಲ ಕರ್ಫ್ಯೂ ವಿಸ್ತರಣೆ ಮಾಡಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ.

ಕೇರಳದಿಂದ ಆಗಮಿಸುವ ಪ್ರವಾಸಿಗರಿಗೆ ಗೋವಾ ರಾಜ್ಯ ಪ್ರವೇಶಿಸಲು RTPCR ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದ್ದು, ಇತರ ರಾಜ್ಯಗಳಿಂದ ಗೋವಾಕ್ಕೆ ಆಗಮಿಸುವ ಪ್ರವಾಸಿಗರಿಗೆ ಕೋವಿಡ್ ಎಂಟಿಜನ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ.

ಇನ್ನು ಕಾರವಾರದಿಂದ ಗೋವಾಕ್ಕೆ ಪ್ರತಿದಿನ ತೆರಳುವ ವಾಹನ ಹಾಗೂ ಉದ್ಯೋಗಿಗಳಿಗೂ ಈ ನಿಯಮ ಜಾರಿ ಮಾಡಲಾಗಿದ್ದುಇದೀಗ ಕಾರವಾರದಿಂದ ಪ್ರತಿ ದಿನ ತೆರಳುವ ಜನರಿಗೂ ಸಹ ತೊಂದರೆಯಾಗುತ್ತಿದೆ.

Related Articles

Leave a Reply

Your email address will not be published. Required fields are marked *

Back to top button