Breaking NewsLatestರಾಜ್ಯಸುದ್ದಿ
‘ವೇತನ’ ಆಯೋಗ ರಚನೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ವೇತನ ಆಯೋಗ ರಚನೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಇಲ್ಲಿದೆ. ನೌಕರರ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಿಸಲು ಇದೇ ತಿಂಗಳು ವೇತನ ಆಯೋಗ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
‘ಪುಣ್ಯಕೋಟಿ’ ದತ್ತು ಯೋಜನೆಗೆ ರಾಜ್ಯ ಸರ್ಕಾರಿ ನೌಕರರು ನೀಡಿದ ದೇಣಿಗೆಯ ಸಮ್ಮತಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಸಿದ್ಧವಿದೆ ಎಂದರು.
ಈಗಾಗಲೇ ನಮ್ಮ ಸರ್ಕಾರ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿದ್ದು, ಈಗ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಿಸಲು ಶೀಘ್ರದಲ್ಲೇ ವೇತನ ಆಯೋಗ ರಚಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
